ಅಕ್ರಮವಾಗಿ ನಿರ್ಮಿಸಲಾಗಿದ್ದು, ದರ್ಗಾವನ್ನು ನೆಲಸಮ ಮಾಡುವ ಸಂದರ್ಭದಲ್ಲಿ ಪೊಲೀಸರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದು, 11 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ನಾಸಿಕ್‌ನ ದ್ವಾರಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ವಿದ್ಯುತ್ ಕಡಿತದ ಲಾಭ ಪಡೆದು ಗುಂಪೊಂದು ಕಲ್ಲು ತೂರಾಟ ನಡೆಸಿದ್ದರು. ಹಿಂಸಾಚಾರದಲ್ಲಿ ಐದು ವಾಹನಗಳು ಸಹ ಹಾನಿಗೊಳಗಾದವು. ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ನಾಸಿಕ್ ಪೊಲೀಸರು ಆ ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಸಂಚಾರ ಮಾರ್ಗಗಳನ್ನು ಸಹ ಬದಲಾಯಿಸಿದ್ದಾರೆ.