ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಗಬೇಕು ಎಂದು ಪುನಃ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ನೀಡಲಿಲ್ಲ. ಪಕ್ಷದ ಸೀನಿಯರ್ ಲೀಡರ್ಗಳಾಗಿರುವವರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಾಯಿಮುಚ್ಚಿಕೊಂಡು ಕೊಟ್ಟ ಕೆಲಸ ಮಾಡುವಂತೆ ಹೇಳಿರುವುದನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ, ಅವರಲ್ಲಿ ಪರಮೇಶ್ವರ್ ಕೂಡ ಒಬ್ಬರು.