ರಜನಿಕಾಂತ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಮೊದಲು ಬೆಂಗಳೂರಿನ ಜಯನಗರ ಡಿಪೋಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಅವರು ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಜನಿಕಾಂತ್ಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಈ ಕಾರಣಕ್ಕೆ ಅವರು ಸಾಕಷ್ಟು ದೇವಾಲಯಗಳಿಗೆ ಈ ಮೊದಲು ಭೇಟಿ ನೀಡಿದ್ದಾರೆ. ಅದೇ ರೀತಿ ರಾಘವೇಂದ್ರ ಸ್ವಾಮಿಗೆ ಪೂಜೆ ಮಾಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.