ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಫೆಂಗಲ್ ಚಂಡಮಾರುತದಿಂದಾಗಿ ದೊಡ್ಡ ಅಲೆಗಳು ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಎಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನಾಡದೋಣಿಗಳು ಸುರಕ್ಷಿತ ಸ್ಥಳಗಳಲ್ಲಿ ಲಂಗರು ಹಾಕಿವೆ.