ವಾಟ್ ಎ ಕ್ಯಾಚ್ ಕೃನಾಲ್..! ತಬ್ಬಿ ಮುದ್ದಾಡಿದ ಕೊಹ್ಲಿ

ಐಪಿಎಲ್ 2025 ರ 37 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಚಂಡೀಗಢದ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆರ್​ಸಿಬಿ 7 ವಿಕೆಟ್​ಗಳಿಂದ ಗೆದ್ದು ಬೀಗಿತು. ಇದೀಗ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್‌ ಸಮಯದಲ್ಲಿ ಶ್ರೇಯಸ್ ಅಯ್ಯರ್ ಔಟಾದಾಗ ವಿರಾಟ್ ಕೊಹ್ಲಿ ಮಾಡಿದ ಸಂಭ್ರಮಾಚರಣೆ ನೋಡಿ ಎಲ್ಲರೂ ಆಶ್ಚರ್ಯಚಕಿತರಾದರು.