ಕಾಸರಗೋಡು: ಡಿವೈಡರ್​ಗೆ ಡಿಕ್ಕಿಯಾದ ಕಾರು, ಮೂವರ ಸಾವು

ಮಂಗಳೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಾಮಂಜೂರು ಬಳಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಮೃತಪಟ್ಟವರು. ಕುಟುಂಬದ ಇನ್ನೊಬ್ಬ ಸದಸ್ಯೆ ರತ್ನಾ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಉಪ್ಪಳದ ನಿವಾಸಿಗಳು. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.