ಅರಮನೆ ಮೈದಾನದಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಪ್ರಮುಖ ಪ್ರದೇಶವಾದ ಅರಮನೆ ಮೈದಾನದಲ್ಲಿ ಭಾನುವಾರ ಮಧ್ಯಾನ್ನ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದು, ಸ್ಥಳಕ್ಕೆ ಧಾವಿಸಿದ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ಅವಘಡ ಸಂಭವಿಸಿಲ್ಲ ಎನ್ನಲಾಗಿದೆ. ಬೆಂಕಿಯ ತೀವ್ರತೆಯಿಂದ ಸ್ಥಳದಲ್ಲಿ ದಟ್ಟ ಹೋಗಿ ಆವರಿಸಿತ್ತು.