ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪದ ವಿಚಾರದಲ್ಲಿ ಸರ್ಕಾರದ ನಡೆಯ ಬಗ್ಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಳಿಕ, ಕರ್ನಾಟಕ ಸರ್ಕಾರ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದೆ. ಇದರೊಂದಿಗೆ, ಪ್ರಭಾವಿ ರಾಜಕಾರಣಿಯೊಬ್ಬರ ಹಾಗೂ ಕೇಂದ್ರ ಸಚಿವರ ವಿರುದ್ಧವೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದಂತಾಗಲಿದೆ.