ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ

Bangalore Weather Report: ಬೆಂಗಳೂರು ಜನತೆಗೆ ಕೂಲ್ ಕೂಲ್ ನ್ಯೂಸ್ ಇದಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ. ಸೆಪ್ಟೆಂಬರ್‌ 2 ರಿಂದ 7 ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.