ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನೆರವಾಗಿದ್ದಾರೆ. ಅವರು ತಮ್ಮ ಪೊಲೀಸ್ ಬೆಂಗಾವಲು ವಾಹನದಲ್ಲಿ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಆಸ್ಪತ್ರೆ ನಿರ್ದೇಶಕರಿಗೆ ಕರೆ ತುರ್ತು ಚಿಕಿತ್ಸೆಗೆ ಸೂಚಿಸಿದರು. ಈ ಘಟನೆಯಿಂದ ಸಚಿವರ ಮಾನವೀಯತೆ ಎದ್ದು ಕಾಣುತ್ತದೆ.