‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ

ನಟ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ತೆರಳಿದ್ದರು. ಚಿತ್ರೀಕರಣ ಮುಗಿಸಿ ಇದೀಗ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಅವರುಗಳು ಸಹ ರಾಜಸ್ಥಾನಕ್ಕೆ ಹೋಗಿದ್ದರು. ರಾಜಸ್ಥಾನದಲ್ಲಿ ‘ಡೆವಿಲ್’ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ಮುಗಿದಿದೆ. ಮುಂದಿನ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ.