ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ: ಪ್ರಲ್ಹಾದ ಜೋಶಿ ತಿರುಗೇಟು

ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ (Siddaramaiah) ಕೂಡ ಲುಂಗಿ ಲೀಡರ್ ( Lungi Leader) ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ ಆ ಲೆವೆಲ್ ಗೆ ಇಳಿದು ಮಾತಾಡಲ್ಲ. ಆದರೆ ಸಿದ್ದರಾಮಯ್ಯನವರೂ ಸಹ ಲುಂಗಿ ಲೀಡರ್ ಅನ್ನೋದನ್ನ ಕಾಂಗ್ರೆಸ್ ಪಕ್ಷ ಮರೆಯಬಾರದು. ನಾವೂ ಸಹ ಅದೇ ಭಾಷೆಯಲ್ಲಿ ಉತ್ತರ ಕೊಡಬಹುದು. ಆದರೆ ಆ ಲೆವೆಲ್ ಗೆ ಇಳಿಯಲ್ಲ ಎಂದರು.