ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎನ್ಡಿಎ 3ನೇ ಬಾರಿ ಸರ್ಕಾರ ರಚಿಸಲು ಸಜ್ಜಾಗಿದೆ. ಇಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಬಂದ ನರೇಂದ್ರ ಮೋದಿಯವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.