ಮಳೆ ಇನ್ನೂ 3-4ದಿನಗಳ ಕಾಲ ಸುರಿಯುವ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ವರದಿಗಾರ ಹೇಳುತ್ತಾರೆ. ಕರಾವಳಿ ಪ್ರದೇಶದ ಎಲ್ಲ ನದಿಗಳು ಉಕ್ಕಿ ಹರಯುತ್ತಿವೆ ಮತ್ತು ನದಿಪಾತ್ರದ ಜನ ಪ್ರವಾಹದ ಭೀತಿಯಲ್ಲಿದ್ದಾರೆ.