ಸಿಟಿ ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​ ಕರೆಗಳು: ವಿಡಿಯೋ ವೈರಲ್​

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಎಂಎಲ್​ಸಿ ಅವರನ್ನು ಗುರುವಾರ ಬಂಧಿಸಲಾಗಿತ್ತು. ಸಿಟಿ ರವಿಯವರನ್ನು ಬಂಧಿಸಿದ ಪೊಲೀಸರು ಅವರನ್ನು ರಾತ್ರಿವಿಡೀ ವಿವಿಧಡೆ ಸುತ್ತಾಡಿಸಿದ್ದಾರೆ. ಈ ಸುತ್ತಾಟದ ಮಧ್ಯೆ ಪೊಲೀಸರಿಗೆ ಹಿರಿಯ ಅಧಿಕಾರಿಗಳ ಅಥವಾ ಪ್ರಭಾವಿ ವ್ಯಕ್ತಿಗಳ ಫೋನ್​ ಕರೆಗಳು ಕೂಡ ಬರುತ್ತಿದ್ದವು ಎಂಬುವುದಕ್ಕೆ ಸಾಕ್ಷಿ ಎಂಬಂತೆ ವಿಡಿಯೋವೊಂದು ವೈರಲ್​ ಆಗಿದೆ.