ನಟ ಶಿವರಾಜ್ಕುಮಾರ್ ಇದ್ದಲ್ಲಿ ಎನರ್ಜಿ ಇರುತ್ತದೆ. ವಯಸ್ಸು 60 ದಾಟಿದ್ದರೂ ಕೂಡ ಅವರ ಹುಮ್ಮಸ್ಸು ಕಿಂಚಿತ್ತೂ ಕಡಿಮೆ ಆಗಿಲ್ಲ. ಹದಿಹರೆಯದ ಹುಡುಗರಿಗೂ ಪೈಪೋಟಿ ನೀಡುವಂತೆ ಶಿವಣ್ಣ ಡ್ಯಾನ್ಸ್ ಮಾಡುತ್ತಾರೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಇಲ್ಲಿದೆ. ಅಮೆರಿಕದ ಟೆಕ್ಸಾಸ್ನಲ್ಲಿ ‘ನಾವಿಕ ವಿಶ್ವ ಕನ್ನಡ ಸಮಾವೇಶ’ ನಡೆಯುತ್ತಿದೆ. ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 3ರ ತನಕ ಈ ಸಮಾರಂಭ ನಡೆಯಲಿದೆ. ಇದರಲ್ಲಿ ಶಿವರಾಜ್ಕುಮಾರ್ ಅವರು ಭಾಗವಹಿಸಿದ್ದಾರೆ. ವೇದಿಕೆ ಮೇಲೆ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಪಂಚೆ ಧರಿಸಿ ಅವರು ಕುಣಿದ ಪರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಶಿವಣ್ಣನ ಎನರ್ಜಿ ಕಂಡು ಎಲ್ಲರೂ ವಾವ್ ಎನ್ನುತ್ತಿದ್ದಾರೆ. ‘ಘೋಸ್ಟ್’, ‘ಕರಟಕ ದಮನಕ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವರಾಜ್ಕುಮಾರ್ ಅವರು ಬ್ಯುಸಿ ಆಗಿದ್ದಾರೆ. ಆ ಕೆಲಸಗಳ ನಡುವೆಯೂ ಅವರು ‘ನಾವಿಕ ವಿಶ್ವ ಕನ್ನಡ ಸಮಾವೇಶ’ದಲ್ಲಿ ಭಾಗಿಯಾಗಿದ್ದಾರೆ.