ಈ ಹೊಸ ಟರ್ಮಿನಲ್ ಕಟ್ಟಡವನ್ನು ತಮಿಳುನಾಡು ರಾಜ್ಯದ ಅಭಿವೃದ್ಧಿಯಲ್ಲಿ ಒಂದು "ದೊಡ್ಡ ಹೆಜ್ಜೆ" ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಹಿಂದಿನ 3 ಲಕ್ಷಕ್ಕೆ ಹೋಲಿಸಿದರೆ ಈ ಹೊಸ ಟರ್ಮಿಲ್ನಲ್ಲಿ ವಾರ್ಷಿಕವಾಗಿ 20 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದಾರೆ. 17,340 ಚದರ ಮೀಟರ್ ವಿಸ್ತೀರ್ಣದ ಈ ಟರ್ಮಿನಲ್ ಅನ್ನು 1,350 ಪ್ರಯಾಣಿಕರನ್ನು ಮತ್ತು ವಾರ್ಷಿಕವಾಗಿ 20 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ.