ಗ್ವಾಟೆಮಾಲಾ ರಾಜಧಾನಿಯ ಹೊರವಲಯದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 55 ಜನರು ಸಾವನ್ನಪ್ಪಿದ್ದಾರೆ. ಬಸ್ಸೊಂದು ಸೇತುವೆಯಿಂದ ಉರುಳಿ ಕಂದಕಕ್ಕೆ ಬಿದ್ದಿದೆ. ಘಟನಾ ಸ್ಥಳದಲ್ಲಿ 53 ಶವಗಳನ್ನು ಹೊರತೆಗೆಯಲಾಗಿದ್ದು, ಇಬ್ಬರು ಪ್ರಯಾಣಿಕರು ಸ್ಯಾನ್ ಜುವಾನ್ ಡಿ ಡಿಯೋಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕ ಸಚಿವಾಲಯದ ತನಿಖಾಧಿಕಾರಿಗಳು ತಿಳಿಸಿದ್ದಾರೆ.