ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವ ಸಂದರ್ಭದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿರುವ ಬಗ್ಗೆ ಸಂಭ್ರಮದ ವಾತಾವರಣವಿದೆ. ಜನ 22 ನೇ ತಾರೀಖನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರ ಸಂತೋಷ ಮತ್ತು ನಾಡಿನ ನೆಮ್ಮದಿ ಕೆಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಜಯೇಂದ್ರ ಹೇಳಿದರು.