156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್ ಡ್ಯಾಂ

ಕರ್ನಾಟಕದ ಪ್ರಸಿದ್ಧ ಕೃಷ್ಣರಾಜ ಸಾಗರ ಜಲಾಶಯ ನಿರ್ಮಾಣದ ಬಳಿಕ ಈವರೆಗೆ ಮಾಡಿರದ ಸಾಧನೆ ಮಾಡಿ ದಾಖಲೆ ಬರೆದಿದೆ. ಮಂಡ್ಯ ಜಿಲ್ಲೆಯ ಕೆಆರ್​ಎಸ್ ಡ್ಯಾಂ ನಿರಂತರ 155 ದಿನಗಳ ಕಾಲ ಗರಿಷ್ಠ ಮಟ್ಟದಲ್ಲಿ ನೀರಿನ ಸಂಗ್ರಹ ಕಾಯ್ದುಕೊಂಡಿದೆ. ಅಣೆಕಟ್ಟೆಯ ಇತಿಹಾಸದಲ್ಲಿ ಈ ಸಾಧನೆ ಇದೇ ಮೊದಲಾಗಿದೆ.