ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ, 7 ಬಾರಿ ಚುನಾವಣೆ ಗೆದ್ದಿದ್ದೇನೆ; ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಜ್ಯಸಭೆಯಲ್ಲಿ ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸಿಬಿಐ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಚರ್ಚೆ ಬಿಸಿಯಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಬಿಐ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.