ಬಜೆಟ್​ ಅಧಿವೇಶನದಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ಬಿಜೆಪಿ, ಕಾಂಗ್ರೆಸ್​ ನಾಯಕರು

ಕರ್ನಾಟಕ ಬಜೆಟ್​ ಅಧಿವೇಶನ 2024 ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ನಾಯಕರು ಭಾರತ್​ ಮಾತಾ ಕೀ ಜೈ, ಜೈ ಶ್ರೀರಾಮ ಎಂದು ಘೋಷಣೆ ಕೂಗಿದರು. ಕೂಡಲೆ ಕಾಂಗ್ರೆಸ್​ ಶಾಸಕರೂ ಕೂಡ ಜೈ ಶ್ರೀರಾಮ ಎಂದು ಘೋಷಣೆ ಕೂಗಲು ಆರಂಭಿಸಿದರು.