ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿಯ ಉದ್ಯಾನ್ ಎಕ್ಸ್ಪ್ರೆಸ್ ರೈಲಿನ ಒಳಗಡೆ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.