ಮೈಸೂರು, ಸೆ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಲಂಚಾವತಾರ ಬಯಲಿಗೆ ಬಂದಿದೆ. ಹಣ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ವಿದ್ಯಾರ್ಥಿಯೊಬ್ಬ ಪ್ರಾಧ್ಯಾಪಕರ ಜೊತೆ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ.