ಜುಲೈ 9ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ದಶಕಗಳ ಹಿಂದಿನ ನಿಷೇಧವನ್ನು ತೆಗೆದುಹಾಕಿದೆ. ಈ ಕ್ರಮಕ್ಕೆ ಆರ್‌ಎಸ್‌ಎಸ್ ಮೆಚ್ಚುಗೆ ವ್ಯಕ್ತಪಡಿಸಿದೆ. ಹಾಗೇ, ಸರ್ಕಾರದ ಈ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಟೀಕೆ ಮಾಡಿದೆ.