ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ

ರಾಜ್ಯದ ಈ ಸಂಕಷ್ಟದ ಸಮಯದಲ್ಲಿ ಅವರು ತಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದ ಅವರು ಕಾವೇರಿ ನೀರಿಗಾಗಿ ಕನ್ನಡಿಗರು ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲೇಬೇಕಿದೆ ಎಂದರು. ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಉದ್ದೇಶಿಸಿ, ಅವರು ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಅದಕ್ಕಾಗಿ ತಾವು ಕಾಯುತ್ತಿರುವುದಾಗಿ ಹೇಳಿದರು.