181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್

ದುಲೀಪ್ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯವನ್ನಾಡುತ್ತಿರುವ ಮುಶೀರ್, ದ್ವಿಶತಕ ಗಳಿಸಲು ಸಾಧ್ಯವಾಗದಿದ್ದರೂ, ಅವರು 181 ರನ್‌ಗಳ ಇನ್ನಿಂಗ್ಸ್‌ನೊಂದಿಗೆ ಸಚಿನ್ ತೆಂಡೂಲ್ಕರ್ ಅವರ 33 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ತಮ್ಮ ಇನ್ನಿಂಗ್ಸ್​ನಲ್ಲಿ 373 ಎಸೆತಗಳನ್ನು ಎದುರಿಸಿದ ಮುಶೀರ್, ತಮ್ಮ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಹೊಡೆದರು.