ಕರಿ ಹರಿಯುವ ವೇಳೆ ಅವಘಡ: ಹಲವರಿಗೆ ಕೊಂಬಿನಿಂದ ತಿವಿದ ಹೋರಿ, ವಿಡಿಯೋ ವೈರಲ್​​

ವಿಜಯಪುರ: ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕರ್ನಾಟಕ ಭಾಗದ ರೈತರು ಕಾರ ಹುಣ್ಣಿಮೆಯನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದಂದು ಕರಿ ಹರಿಯುವ ಸ್ಪರ್ಧೆಯನ್ನು ಸಹ ಆಯೋಜನೆ ಮಾಡಲಾಗುತ್ತದೆ. ಈ ವೇಳೆ ಆಕಸ್ಮಿಕ ಅವಘಡಗಳು ಸಂಭವಿಸುತ್ತವೆ. ಸದ್ಯ ಅಂತಹದ್ದೇ ಒಂದು ಅವಘಡ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ನಡೆದಿದೆ. ಕರಿ ಹರಿಯುವ ವೇಳೆ ಹಲವರಿಗೆ ಕೊಂಬಿನಿಂದ ಹೋರಿ ತಿವಿದು ಗಾಯಗೊಳಿಸಿದೆ.