ಮಂಗಳೂರು, ಅ.9: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸೂಚನೆಯ ಮೇರೆಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರವಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರು ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರು, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.