ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿಯೇ ಎನ್ಡಿಎ ಒಕ್ಕೂಟದ ಅಭ್ಯರ್ಥಿ ಎಂದು ನೇರವಾಗಿ ಹೇಳುವ ಬದಲು ಕುಮಾರಸ್ವಾಮಿಯವರು ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸುವ ಮತ್ತು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಪ್ರಾಯ ಕೇಳುವ ಮಾತನ್ನಾಡುತ್ತಾರೆ.