ವ್ಯಕ್ತಿಯೊಬ್ಬ ಗೋಲಿ ಚಲ್ ಜಾವೇಗಿ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿರುವ ಉತ್ತರ ಪ್ರದೇಶದ, ಮಹೋಬಾ ಜಿಲ್ಲೆಯಲ್ಲಿ ನಡೆದಿದೆ. ಧಾರ್ಮಿಕ ಕುವಾನ್ ಪೂಜನ್ ಸಮಾರಂಭ ನಡೆಯುತ್ತಿತ್ತು. ಈ ವೇಳೆ ನೃತ್ಯಗಾರ್ತಿಯರನ್ನು ಕರೆಸಲಾಗಿತ್ತು. ಗೋಲಿ ಚಲ್ ಚಾವೇಗಿ ಹಾಡಿಗೆ ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ. ಪರಿಣಾಮವಾಗಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ