ಕಿಚ್ಚ ಸುದೀಪ್ ಮಗಳು ಸಾನ್ವಿ ಚಿತ್ರರಂಗಕ್ಕೆ ಎಂಟ್ರಿ ನೀಡಿಲ್ಲ. ಆದರೆ, ಸುದೀಪ್ ಮಗಳು ಎನ್ನುವ ಕಾರಣಕ್ಕೆ ಇನ್ಸ್ಟಾಗ್ರಾಮ್ನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಆಗಾಗ, ಹೊಸ ಫೋಟೋ ಹಾಗೂ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಸಾನ್ವಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸಾನ್ವಿ ಚಿತ್ರರಂಗಕ್ಕೆ ಕಾಲಿಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.