ಮಹಾರಾಷ್ಟ್ರದ ವಾಶಿಮ್‌ಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಬಂಜಾರ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಡೋಲನ್ನು ಬಾರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ನಂಗಾರಾ ಸಂಸ್ಕೃತಿಯನ್ನು ಇನ್ನಷ್ಟು ಜನಪ್ರಿಯಗೊಳಿಸಲು ನಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.