ಟ್ರಿನಿಡಾಡ್ ಮತ್ತು ಟೊಬೆಗೊದ ಆರ್ಡರ್ ಆಫ್ ಪ್ರಶಸ್ತಿಯನ್ನು ಪಡೆದ ಮೊದಲ ವಿದೇಶಿ ನಾಯಕರೆಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಇದು ಪ್ರಧಾನಿ ಮೋದಿ ಅವರಿಗೆ ಬೇರೆ ದೇಶ ನೀಡಿದ 25ನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಪ್ರಧಾನಿ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ಮೋದಿ ಅವರ ಜಾಗತಿಕ ನಾಯಕತ್ವ, ವಲಸೆಗಾರರೊಂದಿಗಿನ ಅವರ ಸಂಬಂಧ ಮತ್ತು ಕೋವಿಡ್ -19 ಸಮಯದಲ್ಲಿ ಅವರ ಮಾನವೀಯ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.