ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಚ್ಚುತ್ತಿದ್ದರು. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿ ಅಂತ ಅಂಗಲಾಚಿ ಬೇಡಿಕೊಂಡರೂ ಪೊಲೀಸರು ಮಾತ್ರ ತಮಗೆ ಸಂಬಂಧವೇ ಇಲ್ಲ ಎಂಬಂತೆ ನಿಂತು ನೋಡುತ್ತಿದ್ದ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.