ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ಪಂಚಾಯತಿ ವ್ಯಾಪ್ತಿಯ 200ಕ್ಕೂ ಅಧಿಕ ಎಕ್ರೆ ಕೃಷಿ ಭೂಮಿ ಹೊಂದಿರುವ ಪ್ರದೇಶದಲ್ಲಿ ಕೃಷಿಭೂಮಿಯನ್ನು ಪಡೆದು ಅದಕ್ಕೆ ಮಣ್ಣು ತುಂಬಿ ಕೃಷಿಕರ ಬದುಕಿಗೆ ಕೊಳ್ಳಿ ಇಡಲು ಮುಂದಾದ ವ್ಯಕ್ತಿಗಳ ಭೂ ಮಾಫಿಯದ ವಿರುದ್ಧ ಗರಂ ಆದ ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್ ಹೆಗ್ಡೆ, ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡುವ ಯಾವುದೇ ಲೇ ಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.