ಉಚ್ಛ್ರಾಯ ಸ್ತರದಲ್ಲಿ ರಾಮ ಜಪ, ಜೈಲಿನಲ್ಲಿ ರಾಮನ ನೆನೆದು ಭಾವುಕರಾದ ಕೈದಿಗಳು

ಹೊರಗಿನವರಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ ನೋಡುವ ಭಾಗ್ಯ ದೊರೆಯಲಿದೆ. ಜೊತೆಗೆ ಮಂತ್ರಾಕ್ಷತೆ ಸಹ ಸಿಗಲಿದೆ, ಆದ್ರೆ ಒಂದಲ್ಲಾ ಒಂದು ಕಾರಣಕ್ಕೆ ತಪ್ಪು ಮಾಡಿ ಜೈಲು ಸೇರಿರುವ ಇವರಿಗೆ ಈ ತರಹದ ಅವಕಾಶಗಳು ಇರುವುದಿಲ್ಲ. ಹಾಗಾಗಿ ಇಂತಹವರಿಗೂ ಈ ಭಾಗ್ಯ ತಪ್ಪದೆ ಸಿಗಲಿ ಹಾಗೂ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಡೆದು ಜೈಲಿನಿಂದ ಆಚೆ ಬಂದ ಬಳಿಕ ಸನ್ಮಾರ್ಗದಲ್ಲಿ ನಡೆಯಲಿ, ರಾಮನ ಗುಣಗಳನ್ನ ಅನುಸರಿಸಲಿ ಎಂದು ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಯ್ತು. ಇನ್ನು ತುಳಸಿ ಮಾಲೆ, ಮಂತ್ರಾಕ್ಷತೆ ಪಡೆದ ಕೆಲ ಕೈದಿಗಳು ಕೆಲ ಕಾಲ ಭಾವುಕರಾಗಿ ಕಣ್ಣೀರು ಹಾಕಿದ ಪ್ರಸಂಗವು ಸಹ ನಡೆಯಿತು ಎಂದು ಮುಖ್ಯ ಅರ್ಚಕರಾದ ಅನಂತ ಪ್ರಸಾದ್ ಮಾಹಿತಿ ನೀಡಿದ್ದಾರೆ.