ನಿನ್ನೆ ಬೆಂಗಳೂರಲ್ಲಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಗೊಂಡ ಸಂದರ್ಭದಲ್ಲಿ ಹರ್ಷಗೌಡ ಸಹ ಬಿಜೆಪಿ ತೆಕ್ಕೆಗೆ ಜಾರಿದ್ದಾರೆ. ಹರ್ಷ, ಸಚಿವ ಶಿವಾನಂದ ಪಾಟೀಲ್ ಸಹೋದರನ ಪುತ್ರ. ಅವರ ಬಿಜೆಪಿ ಸೇರ್ಪಡೆಯಿಂದ ಬಾಗಲಕೋಟೆ ಲೋಕಸಭಾ ಕ್ಷೆತ್ರದ ಮತದಾರರ ಮೇಲೆ ಎಷ್ಟು ಪ್ರಭಾವ ಬೀರುತ್ತದೋ ಗೊತ್ತಿಲ್ಲ ಅದರೆ ಪಾಟೀಲ್ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಸ್ಪಷ್ಟವಾಗುತ್ತದೆ.