ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸಾರ್ವಜನಿಕರ ಜಯಘೋಷಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ರೋಡ್ ಶೋ ನಡೆಸಿದರು. ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಆಂಧ್ರದ ಗವರ್ನರ್ ಸೈಯದ್ ಅಬ್ದುಲ್ ನಜೀರ್, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಬಿಜೆಪಿ ಮುಖಂಡರು ಪ್ರಧಾನಿಯವರನ್ನು ಅಭಿನಂದಿಸಿದರು.