ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಬಿಜೆಪಿಯ ಸಾಧನೆಗಳನ್ನು ಪ್ರಸ್ತಾಪಿಸಿದಾಗ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷ ರಾಜಕೀಯಕ್ಕೆ ಅವಕಾಶವಿಲ್ಲ ಎಂದು ಅವರು ವಾದಿಸಿದರು. ಮಾತಿಗೆ ಮಾತು ಬೆಳೆದು, ಪ್ರದೀಪ್ ಈಶ್ವರ್ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆದರು. ರವೀಂದ್ರ ಕಲಾಕ್ಷೇತ್ರದಲ್ಲಿ ಈ ಘಟನೆ ನಡೆದಿದೆ.