ಶಿರಾಡಿ ಘಾಟ್​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಹಲವು ವಾಹನಗಳು

ಕಳೆದ ವಾರವಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಭೂಕುಸಿತ ಸಂಭವಿಸಿದೆ. ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.