ಸ್ಮಶಾಣದಲ್ಲಿ ಪಿಶಾಚಿ ಕುಣಿದಂತೆ ಸಿದ್ದರಾಮಯ್ಯ ಸರ್ಕಾರ ಆಗುತ್ತೆ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿದ್ದಾರೆಯೇ? ಈ ಪ್ರಶ್ನೆಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಬುಧವಾರ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರಕ್ಕೆ ಏನೂ ತೊಂದರೆಯಿಲ್ಲ. ಆದರೆ, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೋ ಇಲ್ಲವೋ ಎಂಬುದು 2024ರ ಲೋಕಸಭೆ ಚುನಾವಣೆಯ (Lok Sabha Election 2024) ನಂತರ ತೀರ್ಮಾನ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಗಬಹುದು ಎಂಬ ಸುಳಿವು ನೀಡಿದ್ದಾರೆ (Kodi Mutt Swamiji Prediction).