ಸೋಲುಗಳಿಂದ ಕಂಗೆಟ್ಟು ದೇವರ ಮೊರೆ ಹೋದ ಸಿಎಸ್​ಕೆ ತಂಡ

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಸೀಸನ್​ನಲ್ಲಿ ತನ್ನ 7ನೇ ಲೀಗ್ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡುತ್ತಿದೆ. ಈ ಪಂದ್ಯ ಲಕ್ನೋದ ತವರು ಮೈದಾನವಾದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಹೀಗಾಗಿ ಈ ಪಂದ್ಯಕ್ಕೂ ಮುನ್ನ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲವು ಆಟಗಾರರು ರುತುರಾಜ್ ಗಾಯಕ್ವಾಡ್ ಅವರೊಂದಿಗೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂದಿನ ಪಂದ್ಯದಲ್ಲಿ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.