ಹೆಚ್ ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು ನೀಡಿದ್ದು ಹೀಗೆ

ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಕೂಡ ಬರೆದಿದ್ದರು. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಎಡಿಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ಆರೋಪಗಳಿಗೆ ಮತ್ತೆ ತಿರುಗೇಟು ನೀಡಿದ್ದಾರೆ.