ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹೆಚ್.ಡಿ.ರೇವಣ್ಣ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ. ಕಿಡ್ನ್ಯಾಪ್ ಆದ ಮಹಿಳೆ ಪತ್ತೆ ಬಗ್ಗೆ ಪೊಲೀಸರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.