ಶ್ರಾವಣ ಮಾಸದಲ್ಲಿ ವೆಂಕಟರಮಣನ ದರ್ಶನ ಪಡೆದು ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಇದೆ. ಅದರಲ್ಲೂ ಕೊನೆಯ ಶನಿವಾರದಂದು ಭಕ್ತರು ದಂಡುದಂಡಾಗಿ ದೇವಸ್ಥಾನಕ್ಕೆ ತೆರಳಿ ತಮ್ಮ ಹರಕೆಗಳನ್ನು ದೇವರಿಗೆ ಸಲ್ಲಿಸುತ್ತಾರೆ. ಇದು ಪ್ರತಿ ವರ್ಷ ನಡೆಯುವ ಪದ್ಧತಿ.