ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ವಿಶ್ವದ ಅತ್ಯಂತ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್‌ ಸೇತುವೆ ಉದ್ಘಾಟನೆಗೂ ಮುನ್ನ ಪರಿಶೀಲನೆ ನಡೆಸಿದ್ದಾರೆ. ಚೆನಾಬ್‌ ನದಿ ಹರಿಯುವ ಕಣಿವೆ ಮೇಲೆ 359 ಮೀ. (1,178 ಅಡಿ) ಎತ್ತರದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಐಫೆಲ್‌ ಟವರ್‌ಗಿಂತಲೂ ಎತ್ತರವಾಗಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ಪ್ರಯಾಣದ ಅವಧಿಯನ್ನು 2-3 ಗಂಟೆ ಕಡಿತಗೊಳಿಸಿ 3 ಗಂಟೆಗೆ ಸೀಮಿತಗೊ ಳಿಸಲು ಈ ಸೇತುವೆ ನೆರವಾಗಲಿದೆ.