ನಮ್ಮ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ನಗರದಲ್ಲಿ ಒಟ್ಟು ನಾಲ್ಕು ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ. ಮುಖ್ಯಮಂತ್ರಿಯವರಿಗೆ ನಗರ ಪೊಲೀಸ್ ಕಮೀಶನರ್ ಬಿ ದಯಾನಂದ್ ಹಳೆಯ ಕಟ್ಟಡ ಮತ್ತು ಹೊಸ ಕಟ್ಟಡಗಳ ಬಗ್ಗೆ ಫೋಟೋಗಳನ್ನು ತೋರಿಸಿ ವಿವರಣೆ ನೀಡಿದರು. ಹೊಸ ಕಟ್ಟಡದ ಬಗ್ಗೆ ಸ್ಥಳೀಯ ಶಾಸಕ ಮತ್ತು ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಹೆಚ್ಚು ಉತ್ಸುಕರಾಗಿರುವುದನ್ನು ನೋಡಬಹುದು.