ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?

ನಟಿ ಹಂಸಾ ಅವರನ್ನು ಸಿಂಗರ್ ಹನುಮಂತ ನಾಮಿನೇಟ್ ಮಾಡಿದ್ದಾರೆ. ಜೊತೆಗೆ ತಮ್ಮದೇ ಹೆಸರನ್ನು ಕೂಡ ನಾಮಿನೇಟ್ ಮಾಡಿದ್ದಾರೆ. ಹಾಗಾಗಿ ಅವರು ಈ ವಾರವೇ ಎಲಿಮಿನೇಟ್ ಆಗುತ್ತಾರಾ ಎಂಬ ಅನುಮಾನ ಮೂಡಿದೆ. ಇಂದಿನ (ಅಕ್ಟೋಬರ್​ 23) ಸಂಚಿಕೆಯ ಹೊಸ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.