ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು

ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ 7 ಕ್ಕೂ ಅಧಿಕ ಕಾಡಾನೆಗಳು (elephants) ಪ್ರತ್ಯಕ್ಷವಾಗಿವೆ. ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ.